ಕಾರ್ಕಳ: ಶಾಲಾ ಪ್ರವಾಸದ ಬಸ್ಸೊಂದು ಪಲ್ಟಿಯಾಗಿ ಮೂರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾರ್ಕಳ ತಾಲ್ಲೂಕಿನ ನಲ್ಲೂರು ಪಾಜೆಗುಡ್ಡೆ ತಿರುವಿನಲ್ಲಿ ನಡೆದಿದೆ.
ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ರಾಂಪುರ ಶ್ರೀ ಬಸವೇಶ್ವರ ಪ್ರೌಢಶಾಲೆಯ ಶೈಕ್ಷಣಿಕ ಪ್ರವಾಸ ಕ್ರೂಸರ್ ಹಾಗೂ ಬಸ್‌ನಲ್ಲಿ ಹೊರಟಿದ್ದರು. ಒಟ್ಟು 73 ವಿದ್ಯಾರ್ಥಿಗಳಿದ್ದರು ಎಂದು ತಿಳಿದುಬಂದಿದೆ.
ಶಿಕ್ಷಕರ ಸಹಿತ 20 ಮಕ್ಕಳು ಗಾಯಗೊಂಡಿದ್ದಾರೆ. ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳೀಯರು ಹೇಳುವಂತೆ ಬಸ್ ಚಾಲಕನ ಬೇಜವಾಬ್ದಾರಿಯಿಂದಲೇ ಬಸ್ ರಸ್ತೆಗೆ ಮಗುಚಿ ಬಿದ್ದಿದೆ.
ಗಾಯಗೊಂಡ ಮಕ್ಕಳನ್ನು ಕೂಡಲೇ ಸಮೀಪದ ಬಜಗೋಳಿಯ ಬಿಲ್ಲವ ಸಮಾಜ ಸೇವಾ ಸಂಘಕ್ಕೆ ಕರೆದೊಯ್ದು ಶುಶ್ರೂಷೆ ಮಾಡಲಾಗಿದೆ.
ನಂತರ ಆಸ್ಪತ್ರೆಗೆ ದಾಖಲಿಸಿ ಇದೀಗ ಚಿಕಿತ್ಸೆ ನಿಡಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬೇಕಿದೆ.
ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow us on Social media