Breaking News

ಸುಳ್ಯ: ಕಾರು ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ- ಸ್ಕೂಟರ್ ಸವಾರ ಸಾವು

ಸುಳ್ಯ: ಕಾರು ಮತ್ತು ದ್ವಿಚಕ್ರ ವಾಹನವೊಂದರ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ.

ಇಲ್ಲಿನ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂನಡ್ಕ ಸಮೀಪ ಈ ರಸ್ತೆ ಅಪಘಾತ ಸಂಭವಿಸಿದೆ.

ಮೃತರನ್ನು ಕುಕ್ಕಜಡ್ಕ ನಿವಾಸಿ 31 ವರ್ಷದ ನವೀನ್ ಸಂಕೇಶ ಎಂದು ಗುರುತಿಸಲಾಗಿದೆ.

ಸುಳ್ಯದ ಖಾಸಗಿ ಹಣಕಾಸು ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ ನವೀನ್ ತನ್ನ ಸ್ಕೂಟರ್ ನಲ್ಲಿ ಕಲ್ಲುಗುಂಡಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದೆ.

ಕಾರು ಢಿಕ್ಕಿ ಹೊಡೆದ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ನವೀನ್ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×