ಅಹಮದಾಬಾದ್: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಕ್ವಾಲಿಫೈಯರ್ 2 ಪಂದ್ಯದಲ್ಲಿ ಶುಭಮನ್ ಗಿಲ್ ಸ್ಫೋಟಕ ಶತಕದ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 62 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ ಗುಜರಾತ್ ಟೈಟಾನ್ಸ್ ಸತತ 2ನೇ ಬಾರಿಗೆ ಐಪಿಎಲ್‌ನಲ್ಲಿ ಫೈನಲ್ ಪ್ರವೇಶಿಸಿದೆ.
ಟಾಸ್ ಸೋತರೂ ಮೊದಲ ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಗುಜರಾತ್ ಟೈಟಾನ್ಸ್, ನಿಗದಿತ 20 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 233 ರನ್ ಗಳ ಬೃಹತ್ ಟಾರ್ಗೆಟ್ ನೀಡಿತು. ಬೃಹತ್ ಗುರಿ ಬೆನ್ನಟಿದ ಮುಂಬೈ 18.2 ಓವರ್‌ಗಳಲ್ಲಿ 171 ರನ್‌ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಪ್ರಶಸ್ತಿ ಗೆಲ್ಲುವ ಮುಂಬೈ ತಂಡದ ಕನಸು ಕೂಡ ಭಗ್ನಗೊಂಡಿದೆ.
ಐದು ಬಾರಿ ಚಾಂಪಿಯನ್ಸ್ ಪಟ್ಟಕ್ಕೇರಿದ್ದ ಮುಂಬೈ ಇಂಡಿಯನ್ಸ್ ಈ ಸೋಲಿನೊಂದಿಗೆ 2023ರ ಐಪಿಎಲ್ ಆವೃತ್ತಿಗೆ ವಿದಾಯ ಹೇಳಿದೆ.
2022ರ ಆವೃತ್ತಿಯಲ್ಲಿ ಐಪಿಎಲ್ ಪ್ರವೇಶಿಸಿದ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಸತತ 2ನೇ ಬಾರಿಗೆ ಐಪಿಎಲ್‌ನಲ್ಲಿ ಫೈನಲ್ ತಲುಪಿದೆ. ಸೂಪರ್ ಸಂಡೇನಲ್ಲಿ (ಮೇ 28) ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣಸಲಿದೆ.
ಗುಜರಾತ್ ಪರ ಶುಭಮನ್ ಗಿಲ್ ಸ್ಫೋಟಕ ಶತಕ ಬಾರಿಸಿ ಮಿಂಚಿದರು. 60 ಎಸೆತಗಳನ್ನು ಎದುರಿಸಿದ ಗಿಲ್ 10 ಸಿಕ್ಸರ್ ಹಾಗೂ ಏಳು ಬೌಂಡರಿ ಬಾರಿಸುವ ಮೂಲಕ 129 ರನ್ ಗಳಿಸಿ ಗಳಿಸಿ ಔಟಾದರು.
Follow us on Social media