ಮಂಗಳೂರು: ಕಳೆದ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಇಂದು ಮತ್ತು ನಾಳೆ (ಜು.24, 25) ರೆಡ್ ಅಲರ್ಟ್ ಘೋಷಿಸಲಾಗಿದೆ.
ಮುಂಜಾಗೃತಾ ಕ್ರಮವಾಗಿ ಮತ್ತು ಇಂದು ಅನೇಕ ವಿದ್ಯಾರ್ಥಿಗಳು ಭಾರಿ ತೊಂದರೆ ಅನುಭವಿಸಿದ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಮುಂಜಾಗೃತಾ ಕ್ರಮವಾಗಿ ಜು.25 ರಂದು ದಕ್ಷಿಣ ಕನ್ನಡ ಜಿಲ್ಲಅಧಿಕಾರಿ ಮುಲೈ ಮುಗಿಲನ್ ರಜೆ ಘೋಷಿಸಿದ್ದಾರೆ.
ಹಾಗೇಯೇ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.
Follow us on Social media