ಬೆಂಗಳೂರು: ಬೆಂಗಳೂರು ನಗರದ ಹೊರವಲಯದ ಕನಕಪುರ ರಸ್ತೆಯ ಪಕ್ಕದಲ್ಲಿ ಬಾಕ್ಸ್ಗಳಲ್ಲಿ ಎರಡು ಸಾವಿರ ಮುಖಬೆಲೆಯ ಲಕ್ಷಾಂತರ ರೂಪಾಯಿ ಮೌಲ್ಯದ 2 ಸಾವಿರ ಮುಖಬೆಲೆಯ ನೋಟುಗಳು ಪತ್ತೆಯಾಗಿವೆ.
ಕನಕಪುರ ರಸ್ತೆಯೊಂದರ ಪಕ್ಕದಲ್ಲಿ ಖಾಲಿ ಜಾಗದಲ್ಲಿ ಪ್ಯಾಕಿಂಗ್ ಮಾಡಿದ ಸ್ಥಿತಿಯಲ್ಲಿ ಎರಡು ಬಾಕ್ಸ್ ಗಳನ್ನ ಕಂಡ ಸ್ಥಳೀಯರು ಅನುಮಾನಗೊಂಡ ಸಮೀಪದಲ್ಲೇ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ತಲಘಟ್ಟಪುರ ಕಾನೂನು ಸುವ್ಯವಸ್ಥೆ ವಿಭಾಗದ ಪೊಲೀಸರನ್ನ ಕರೆಯಿಸಿ ಬಾಕ್ಸ್ ಬಿಚ್ಚಿ ಪರಿಶೀಲಿಸಿದಾಗ ಕಂತೆಕಂತೆ ನೋಟುಗಳು ದೊರಕಿದ್ದು ಒಂದು ಕ್ಷಣ ದಂಗಾಗಿದ್ದಾರೆ.
ಸಂಪೂರ್ಣವಾಗಿ ಪರಿಶೀಲಿಸಿದಾಗ ಅವು ನಕಲಿ ನೋಟುಗಳು ಅನ್ನೋದು ಗೊತ್ತಾಗಿದೆ. ಸದ್ಯ ಈ ನಕಲಿ ನೋಟುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
Follow us on Social media