ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪರ್ಲೊಟ್ ಸಮೀಪ ಮಾಣಿ ಮೈಸೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಈ ಅಪಘಾತ ಸಂಭವಿಸಿದ್ದು ನಾಲ್ವರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಸಂಚಾರಿ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.
ಮುಂಬೈ ಮೂಲದ ಪ್ರಯಾಣಿಕರು ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾರು ಹಾಗೂ ಪುತ್ತೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಈ ಅಪಘಾತ ಸಂಭವಿಸಿದೆ.
ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ ರಸ್ತೆಗಳು ಜಾರುವ ಸ್ಥಿತಿಯಲ್ಲಿದ್ದು ಮಿತಿ ಮೀರಿದ ವೇಗದಲ್ಲಿ ವಾಹನ ಚಲಾಯಿಸಿದರೆ, ನಿಯಂತ್ರಣ ತಪ್ಪಿ ಅಪಘಾತಗಳು ನಡೆಯುವ ಸಂಭವವಿದ್ದು ವಾಹನ ಸವಾರರು ಎಚ್ಚರಿಕೆಯಿಂದ ವಾಹನಗಳನ್ನು ಚಲಾಯಿಸಲು ಹೆದ್ದಾರಿ ಮತ್ತು ಪೊಲೀಸ್ ಅಧಿಕಾರಿಗಳು ಮನವಿ ಮಾಡಿದ್ದಾರೆ.
Follow us on Social media