ಮಂಗಳೂರು : ಗ್ರಾಮೀಣ ಪ್ರತಕರ್ತರಿಗೆ ಉಚಿತ ಬಸ್ ಪಾಸ್ ಹಾಗೂ ಕನ್ನಡ ಪತ್ರಿಕಾ ಲೋಕದ ಪಿತಾಮಹ ಡಾ.ಹೆರ್ಮನ್ ಮೊಗ್ಲಿಂಗ್ ಅವರ ಹೆಸರಿನಲ್ಲಿ ಬೆಂಗಳೂರಿನಲ್ಲಿ ರಸ್ತೆಗೆ ನಾಮಕರಣ ಹಾಗೂ ಪ್ರತಿಮೆ ನಿರ್ಮಿಸುವಂತೆ ಆಗ್ರಹಿಸಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿಯು ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತು.
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ನೇತೃತ್ವದಲ್ಲಿ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಪ್ರಧಾನ ಕಾರ್ಯದರ್ಶಿ ಕೆನ್ಯೂಟ್ ಪಿಂಟೋ, ಕೋಶಾಧಿಕಾರಿ ಗಿರಿಧರ್ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯ ರಮೇಶ್ ಪೆರ್ಲ ಉಪಸ್ಥಿತರಿದ್ದರು.
Follow us on Social media