ಪುತ್ತೂರು: ಎಸ್ಎಸ್ಎಲ್ ಸಿ ಪರೀಕ್ಷಾ ಕೇಂದ್ರದ ಬಳಿ ಸಿನೆಮಾ ಒಂದರ ಶೂಟಿಂಗ್ ನಡೆಯುತ್ತಿದ್ದು, ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಆಗಮಿಸಿ ಚಿತ್ರೀಕರಣ ನಡೆಸದಂತೆ ತಡೆ ನೀಡಿದ ಘಟನೆ ನಡೆದಿದೆ.
ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯುತ್ತಿದ್ದ ಪುತ್ತೂರು ಸಂತ ವಿಕ್ಟರ್ಸ್ ಶಾಲೆಯ ಪಕ್ಕದ ಚರ್ಚ್ ಬಳಿ ಸಿನೆಮಾ ಶೂಟಿಂಗ್ ನಡೆಸಲಾಗುತ್ತಿತ್ತು, ಎಸ್ಎಸ್ಎಲ್ ಸಿ ಪರೀಕ್ಷೆ ಹಿನ್ನಲೆ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿಯಲ್ಲಿದೆ. ಆದರೂ ಸಿನೆಮಾ ಶೂಟಿಂಗ್ ಗೆ ಅವಕಾಶ ನೀಡಲಾಗಿದೆ ಎಂದು ಹೇಳಲಾಗಿದೆ.
ಸಿನೆಮಾ ಶೂಟಿಂಗ್ ನಡೆಯುತ್ತಿರುವ ಬಗ್ಗೆ ದೂರು ಬಂದ ಹಿನ್ನಲೆ ಸ್ಥಳಕ್ಕೆ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಆಗಮಿಸಿ ಶೂಟಿಂಗ್ ನಡೆಸದಂತೆ ತಿಳಿಸಿದರು.
Follow us on Social media