ನವದೆಹಲಿ: ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿದೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಬಿ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿಯಿಂದ ಆದೇಶ ಹೊರಡಿಸಿದೆ.
ಬಿಜೆಪಿ ಶಿಸ್ತು ಸಮಿತಿ ಎರಡು ಬಾರಿ ಶೋಕಾಸ್ ನೋಟಿಸ್ ನೀಡಿದ್ದರೂ ಪದೇ ಪದೇ ಪಕ್ಷದ ವಿರೋಧಿ ಚಟುವಟಿಕೆ, ಪಕ್ಷದ ಶಿಸ್ತು ಉಲ್ಲಂಘನೆ ಮಾಡುತ್ತಿದ್ದರು. ಕೊನೆಗೆ ಫೆಬ್ರವರಿ 10 ರಂದು ಶೋಕಾಸ್ ನೋಟಿಸ್‌ಗೆ ಯತ್ನಾಳ್ ಉತ್ತರ ನೀಡಿದ್ದರು. ಯತ್ನಾಳ್ ಉತ್ತರ, ಸ್ಪಷ್ಟನೆ ಒಪ್ಪದ ಕೇಂದ್ರ ಶಿಸ್ತು ಸಮಿತಿ ಇಂದು(ಮಾರ್ಚ್ 26) ಈ ನಿರ್ಧಾರ ಕೈಗೊಂಡಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟಕ್ಕೆ ಕೊನೆಗೂ ಹೈಕಮಾಂಡ್ ಬ್ರೇಕ್ ಹಾಕಿದೆ. ಅಲ್ಲದೇ ಇತರೆ ರೆಬೆಲ್ ನಾಯಕರಿಗೂ ಪರೋಕ್ಷ ಎಚ್ಚರಿಕೆ ಸಂದೇಶ ರವಾನಿಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದಧ ಬಹಿರಂಗವಾಗಿಯೇ ಆರೋಪಗಳನ್ನು ಮಾಡಿಕೊಂಡು ಬರುತ್ತಿದ್ದರು. ಅಲ್ಲದೇ ತಮ್ಮದೇ ಒಂದು ತಂಡ ಕಟ್ಟಿಕೊಂಡು ಪ್ರತ್ಯೇಕ ಸಭೆ ಮಾಡುತ್ತಿದ್ದರು. ಈ ಸಂಬಂಧ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿತ್ತು. ಆದರೂ ಯತ್ನಾಳ್ ಸೈಲೆಂಟ್ ಇದರೇ ತಮ್ಮ ಅಬ್ಬರ ಮುಂದುವರಿಸಿದ್ದರು. ಹೀಗಾಗಿ ಇತ್ತೀಚೆಗೆಷ್ಟೇ ಮತ್ತೊಂದು ಶೋಕಾಸ್ ನೀಡಲಾಗಿತ್ತು. ಆದದರೂ ಸಹ ಅವರು ತಮ್ಮ ಮಾತಿನ ಸಮರ ಮುಂದುವರಿಸಿದ್ದರು. ಹೀಗಾಗಿ ಅಂತಿಮವಾಗಿ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಿದೆ.
ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರವರಿ 10 ರಂದು ನೀಡಿದ್ದ ಶೋಕಾಸ್ ನೋಟಿಸ್‌ಗೆ ನಿಮ್ಮ ಪ್ರತಿಕ್ರಿಯೆಯನ್ನು ಪರಿಗಣಿಸಿದೆ ಮತ್ತು ಹಿಂದಿನ ಶೋಕಾಸ್ ನೋಟಿಸ್‌ಗಳಿಗೆ ಪ್ರತಿಕ್ರಿಯೆಯಾಗಿ ಉತ್ತಮ ನಡವಳಿಕೆ ಮತ್ತು ನಡವಳಿಕೆಯ ಭರವಸೆಗಳನ್ನು ನೀಡಿದ್ದರೂ ಸಹ, ನೀವು ಪಕ್ಷದ ಶಿಸ್ತಿನ ಪದೇ ಪದೇ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ, ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ. ಹಾಗೇ ನೀವು ಇಲ್ಲಿಯವರೆಗೆ ಹೊಂದಿದ್ದ ಯಾವುದೇ ಪಕ್ಷದ ಹುದ್ದೆಯಿಂದ ನಿಮ್ಮನ್ನು ತೆಗೆದುಹಾಕಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್ ಅವರು ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
Follow us on Social media