Breaking News

ಮಂಗಳೂರು: ಬಸ್​ನಲ್ಲಿ ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿ ಪೊಲೀಸ್ ಬಲೆಗೆ

ಮಂಗಳೂರು: ಮಂಗಳೂರಿನ ಮುಡಿಪು -ಸ್ಟೇಟ್‌ ಬ್ಯಾಂಕ್‌ ಭಾಗದ ಕೆಎಸ್​ಆರ್​ಟಿಸಿ ಬಸ್ಸಿನಲ್ಲಿ ನಿರ್ವಾಹಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ವರದಿಯಾಗಿದ್ದು, ಪ್ರಯಾಣಿಕರೊಬ್ಬರು ಮಾಡಿರುವ ವಿಡಿಯೋ ವೈರಲ್ ಆಗಿದೆ.

ಪೊಲೀಸರು ಆರೋಪಿ ಬಾಗಲಕೋಟೆ ಮೂಲದ ಪ್ರದೀಪ್‌ (40) ವಶಕ್ಕೆ ಪಡೆದಿದ್ದಾರೆ. ಏಪ್ರಿಲ್ 22 ರಂದು ಮುಡಿಪುವಿನಿಂದ ಸ್ಟೇಟ್‌ ಬ್ಯಾಂಕ್​​ನತ್ತ ತೆರಳುತ್ತಿದ್ದ ಬಸ್​​ನಲ್ಲಿ ಯುವತಿ ನಿದ್ರೆಗೆ ಜಾರಿದ್ದರು. ಆ ಸಂದರ್ಭದಲ್ಲಿ ಕಂಡಕ್ಟರ್ ಆ ಯುವತಿಗೆ ಕಿರುಕುಳ ನೀಡಿದ್ದಾನೆ. ಇದನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×