ಉಡುಪಿ: ಅಜ್ಜರಕಾಡು ಭುಜಂಗ ಪಾರ್ಕ್ ಸಮೀಪ ಐಪಿಎಲ್ ಮ್ಯಾಚ್ ಬೆಟ್ಟಿಂಗ್‌ಗಾಗಿ ಹಣ ಸಂಗ್ರಹಿಸುತ್ತಿದ್ದ ಕುಂದಾಪುರದ ಸಂದೀಪ್ (34), ಶ್ರೀರಾಜ್ (33), ಮಧುಕರ್ (44)ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಎ.24ರಂದು ಸೆನ್ ಠಾಣೆಯ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಅವರಿಗೆ ಅಜ್ಜರಕಾಡು ಭುಜಂಗ ಪಾರ್ಕ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಕೆಲ ಮಂದಿ ಯುವಕರು ಜೊತೆಯಾಗಿ ಸೇರಿಕೊಂಡು ಬೆಟ್ಟಿಂಗ್ ಮೊಬೈಲ್ ಆಪ್ ಸಹಾಯದಿಂದ ಸ್ಮಾರ್ಟ್ ಫೋನ್ ಮೂಲಕ ಹೈದರಾಬಾದಿನ ರಾಜೀವ್ ಗಾಂಧಿ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಸನ್ ರೈಸರ್ಸ್ ಹೈದರಾಬಾದ್ ಮತ್ತು ಮುಂಬಯಿ ಇಂಡಿಯನ್ಸ್ ತಂಡಗಳ ನಡುವೆ ನಡೆಯುವ ಕ್ರಿಕೆಟ್ ಮ್ಯಾಚ್‌ಗೆ ಸಂಬಂಧಪಟ್ಟು ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಕೂಡಲೇ ಸ್ಥಳಕ್ಕೆ ತೆರಳಿದಾಗ ಆರೋಪಿಗಳು ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು.
ಸಾರ್ವಜನಿಕರಿಂದ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ಬಗ್ಗೆ ಸಂಗ್ರಹ ಮಾಡಿದ 81,700ರೂ.ನಗದು ಹಾಗೂ 4 ಮೊಬೈಲ್ ಮತ್ತು ಕೃತ್ಯಕ್ಕೆ ಉಪಯೋಗಿಸಿದ ಕಾರು ವಶಡಿಸಿಕೊಳ್ಳಲಾಗಿದೆ. ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow us on Social media