ಮಂಗಳೂರು: ಕೊರೋನಾ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 21 ವರ್ಷದ ವ್ಯಕ್ತಿ ಗುಣಮುಖವಾಗಿದ್ದು ಶುಕ್ರವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
21 ವರ್ಷದ ಯುವಕ ಡಿಸ್ಚಾರ್ಜ್ ಆಗುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾದಿಂದ ಗುಣಮುಖರಾದವರ ಸಂಖ್ಯೆ 7ಕ್ಕೇರಿದೆ.
12 ಕೊರೋನಾ ಪಾಸಿಟಿವ್ ಕೇಸ್ ಗಳು ಈ ಜಿಲ್ಲೆಯಲ್ಲಿ ದಾಖಲಾಗಿದ್ದವು, ಅವರಲ್ಲಿ ಅರ್ಧದಷ್ಟು ಗುಣಮುಖರಾಗಿದ್ದಾರೆ.
ಮಾರ್ಚ್ 21 ರಂದು ದುಬೈನಿಂದ ಬಂದ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿತ್ತು. ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ಕೊರೋನಾ ನೆಗೆಟಿವ್ ಬಂದಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಗಳಲ್ಲಿ ನಿನ್ನೆ ಯಾವುದೇ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ.
Follow us on Social media