ಬೆಂಗಳೂರು : ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ತಡೆಯುವ ನಿಟ್ಟಿನಲ್ಲಿ ಏಪ್ರಿಲ್ ೩೦ ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡುತ್ತಿದ್ದು, ಒಂದೆರಡು ದಿನಗಳಲ್ಲಿ ಇದಕ್ಕೆ ಸಂಬಂಧಿಸಿದ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಲಿದೆ ಎಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ವಿಡಿಯೋ ಸಂವಾದ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕೃಷಿ, ಕೈಗಾರಿಕೆ, ಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವ ಜತೆಗೆ ಸರ್ಕಾರಿ ಕಚೇರಿಗಳನ್ನು ಭಾಗಶಃ ಆರಂಭಿಸಲು ಅನುಮತಿ ನೀಡಲಾಗುವುದು ಎಂದರು.
ಮುಂದಿನ ಎರಡು ವಾರದ ಲಾಕ್ ಡೌನ್ ವಿಭಿನ್ನವಾಗಿರಲಿದೆ. ಹೇಗೆ ಲಾಕ್ ಡೌನ್ ಜಾರಿಯಾಗಬೇಕು ಎಂಬ ಬಗ್ಗೆ ಕೇಂದ್ರ ಸರ್ಕಾರದ ಮಾರ್ಗಸೂಚಿ ಸಿದ್ದಪಡಿಸಲಿದೆ. ಅದರ ಆಧಾರದ ಮೇಲೆ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಕೃಷಿಕರು. ಮೀನುಗಾರರಿಗೆ ಲಾಕ್ ಡೌನ್ ನಿಂದ ವಿನಾಯಿತಿ ನೀಡಿರುವುದಾಗಿ ಯಡಿಯೂರಪ್ಪ ಸ್ಪಷ್ಟಪಡಿಸಿದರು.