ಬೆಂಗಳೂರು : ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್(47) ಹೃದಯಾಘಾತದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಹಿಂದೂ ಸಂಘಟನೆಯಾದ ಬಜರಂಗ ದಳದ ರಾಜ್ಯ ಸಂಚಾಲಕರಾಗಿದ್ದ ಅವರು ಕಟು ಹಿಂದೂವಾದಿಯಾಗಿದ್ದರು. ಆದರೆ ಸಂಘಟನೆಯಿಂದ ಹೊರಬಂದ ಬಳಿಕ ಸಂಘಟನೆಗಳನ್ನು ಸಂಪೂರ್ಣವಾಗಿ ವಿರೋಧಿಸುವ ವ್ಯಕ್ತಿಯಾದರು. ನಮ್ಮ ಧ್ವನಿ ಸ್ಥಾಪನೆ ಮಾಡಿಕೊಂಡು ಸಾಮಾಜಿಕ ರಂಗದಲ್ಲಿ ತೊಡಗಿಸಿಕೊಂಡಿದ್ದರು.
ಮಹೇಂದ್ರ ಕುಮಾರ್ ಗೆ ಶನಿವಾರ ಮುಂಜಾನೆ ಸುಮಾರು 5 ಗಂಟೆಯ ವೇಳೆಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ನಿವಾಸಿಯಾಗಿದ್ದ ಅವರು ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದರು.
Follow us on Social media