ಬೆಂಗಳೂರು : ಕಳೆದ 40 ದಿನಗಳಿಂದ ಕೆಲಸವಿಲ್ಲದೆ ಸಾವಿರಾರು ವಲಸೆ ಕಾರ್ಮಿಕರು ಸಂಕಷ್ಟದಲ್ಲಿ ದಿನ ಕಳೆದಿದ್ದು ಅವರ ಬಳಿ ಬಸ್ ಪ್ರಯಾಣಕ್ಕೆ ಟಿಕೆಟ್ಗೆ ಹಣವೂ ಇಲ್ಲದಂತಹ ಸ್ಥಿತಿ ಇದ್ದು ಅವರುಗಳನ್ನು ಅಮಾನವೀಯವಾಗಿ ನಡೆಸಿಕೊಳ್ಳದೇ ಊರಿಗೆ ತೆರಳಲು ಉಚಿತ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಹೊರ ರಾಜ್ಯದ ಹಾಗೂ ಹೊರ ಜಿಲ್ಲೆಗಳ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಬಸ್ಗಳನ್ನು ವ್ಯವಸ್ಥೆ ಮಾಡಲು ಸರ್ಕಾರ ನಿರ್ಧರಿಸಿರುವುದು ಸ್ವಾಗತಾರ್ಹ. ಆದರೆ ಪ್ರಯಾಣ ವೆಚ್ಚವನ್ನು ಸ್ವತಃ ಕಾರ್ಮಿಕರೇ ಭರಿಸಬೇಕೆಂದು ತೀರ್ಮಾನಿಸಿರುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
Follow us on Social media