Breaking News

ಬೆಂಗಳೂರಿನಲ್ಲಿ ಬೆಳಗ್ಗೆ ಹೊತ್ತು ಸಂಚರಿಸಲು ಪಾಸ್ ಅಗತ್ಯವಿಲ್ಲ: ಭಾಸ್ಕರ್ ರಾವ್

ಬೆಂಗಳೂರು : ಸೋಮವಾರದಿಂದ ಬೆಂಗಳೂರು ನಗರದಲ್ಲಿ ಬೆಳಗ್ಗೆ 7 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ಸಂಚರಿಸಲು ಯಾವುದೇ ಪಾಸ್‌ನ ಅಗತ್ಯವಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮಾಹಿತಿ ನೀಡಿದ್ದಾರೆ.

ಮೇ 4ರ ನಂತರ ಬೆಳಗ್ಗೆ 7 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ಬೆಂಗಳೂರಿನಲ್ಲಿ ಸಂಚರಿಸಲು ಯಾರಿಗೂ ಪಾಸ್ ನ ಅಗತ್ಯವಿಲ್ಲ. ಆದರೆ ರಾತ್ರಿ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ವೈದ್ಯಕೀಯ ಮತ್ತು ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇತರರಿಗೆ ಪಾಸ್ ಇಲ್ಲದೆ ಸಂಚರಿಸಲು ಅವಕಾಶವಿಲ್ಲ. ಚೆಕ್‌ ಪಾಯಿಂಟ್‌ಗಳು ಕಾರ್ಯನಿರ್ವಹಿಸಲಿದ್ದು, ಅಲ್ಲಿ ಸಿಬ್ಬಂದಿ ಗುರುತಿನ ಚೀಟಿ ಕೇಳಲಿದ್ದಾರೆ. ಆದ್ದರಿಂದ ಜವಾಬ್ದಾರಿಯುತವಾಗಿ ನಡೆದುಕೊಳ್ಳಿ ಎಂದು ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದಾರೆ

.
ಬೆಂಗಳೂರಿನಲ್ಲಿ ಪತ್ಯೇಕವಾಗಿರುವ ಅಂಗಡಿಗಳನ್ನು ಬೆಳಗ್ಗೆ 7ರಿಂದ ರಾತ್ರಿ 7ರವರೆಗೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×