ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅವಂತಿಪೊರಾದಲ್ಲಿ ಭಾರತೀಯ ಸೇನಾಪಡೆ ಎನ್’ಕೌಂಟರ್ ನಡೆಸಿದ್ದು, ಓರ್ವ ಉಗ್ರರನನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.
ಅವಂತರಿಪೊರಾದ ಶರ್ಷಾಲಿ ಖ್ರೂ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸೇನಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು.
ಕಾರ್ಯಾಚರಣೆ ವೇಳೆ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದು, ಪರಿಣಾಮ ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಪರಿವರ್ತಿಸಿದ ಯೋಧರು ಇದೀಗ ಓರ್ವ ಉಗ್ರನನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Source : ANI
Follow us on Social media