ಔರಂಗಾಬಾದ್ : ವಲಸೆ ಕಾರ್ಮಿಕರು ಊರಿಗೆ ಹೋಗುವ ಸಮಸ್ಯೆ ದೇಶಾದ್ಯಂತ ಇರುವ ಸಮಯದಲ್ಲಿ ಇದೀಗ ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ರೈಲ್ವೆ ಅಪಘಾತವಾಗಿ 15 ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ.
ಇಂದು ಬೆಳಗ್ಗೆ ಔರಂಗಾಬಾದ್ ನ ಕರ್ಮಡ್ ಪೊಲೀಸ್ ಠಾಣೆ ಸರಹದ್ದಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು ಗೂಡ್ಸ್ ರೈಲು ಜಲ್ನಾದಿಂದ ಔರಂಗಾಬಾದ್ ಕಡೆಗೆ ಸಂಚರಿಸುತ್ತಿತ್ತು. ಈ ಬಗ್ಗೆ ಹೆಚ್ಚಿನ ಮಾಹಿತಿ ಸಿಕ್ಕಿಲ್ಲ ಎಂದು ನೈರುತ್ಯ ರೈಲ್ವೆ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.
Source : ANI
Follow us on Social media