ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಕೆಎಸ್ಆರ್ ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ ಸಂಸ್ಥೆ ಮತ್ತು ಈಶಾನ್ಯ ಸಾರಿಗೆ ಸಂಸ್ಥೆಗಳ ಎಲ್ಲಾ ಸಿಬ್ಬಂದಿಗಳಿಗೆ ಮತ್ತು ಅಧಿಕಾರಿಗಳಿಗೆ ಸಂಬಳ ನೀಡುವ ಉದ್ದೇಶಕ್ಕಾಗಿ ರಾಜ್ಯ ಸರ್ಕಾರ ಒಟ್ಟು 487 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಈ ಮೊತ್ತದಲ್ಲಿ ಸುಮಾರು 325 ಕೋಟಿ ರೂಪಾಯಿಗಳನ್ನು ಏಪ್ರಿಲ್ ತಿಂಗಳ ಸಂಬಳಕ್ಕಾಗಿ ವಿನಿಯೋಗವಾಗಲಿದೆ, ಸಂಬಳವನ್ನು ಸಿಬ್ಬಂದಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದರು.