ಕೊಲ್ಕತ್ತಾ : ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ನಡೆಸುತ್ತಿರುವ ವಿಡಿಯೋ ಕಾನ್ಫರೆನ್ಸ್ನಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರ ವಿರುದ್ದ ತೀವ್ರ ರೀತಿಯ ಆರೋಪ ಮಾಡಿದ್ದಾರೆ.
ಕೊರೊನಾ ವೈರಸ್ ಸಮಸ್ಯೆಯ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ತೀವ್ರ ರೀತಿಯ ಆಕ್ಷೇಪ ವ್ಯಕ್ತಪಡಿಸಿದರು.
ಈ ಸಂಕಷ್ಟ ಸಮಯದಲ್ಲಿ ಕೇಂದ್ರ ಸರ್ಕಾರ ಮೊದಲೇ ಸ್ಕ್ರಿಪ್ಟ್ ಸಿದ್ದಪಡಿಸಿಕೊಂಡು, ಅದಕ್ಕೆ ಅನುಗುಣವಾಗಿ ರಾಜ್ಯಗಳಲ್ಲಿ ಬದಲಾವಣೆಗೆ ಸೂಚಿಸುತ್ತಿದೆ ಎಂದು ತೀವ್ರವಾಗಿ ಆರೋಪಿಸಿದರು.
ಯಾರೊಬ್ಬರು ತಮ್ಮ ಅಭಿಪ್ರಾಯವನ್ನು ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ, ಮನಸ್ಸಿಗೆ ಬಂದಂತೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರದ ವಿರುದ್ದ ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದರು.
Source : UNI
Follow us on Social media