ನವದೆಹಲಿ : ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ಕರೆದಿದ್ದು ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ.
ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದ 20 ಲಕ್ಷ ಕೋಟಿ ಪ್ಯಾಕೇಜ್ ಕುರಿತಂತೆ ಈ ಹಿಂದೆ ಸುದೀರ್ಘ ಮೂರು ಹಂತಗಳ ಮಾಹಿತಿ ನೀಡಿದ್ದ ನಿರ್ಮಲಾ ಸೀತಾರಾಮನ್ ಅವರು ಇಂದು ಮತ್ತೆ ಸುದ್ದಿಗೋಷ್ಠಿ ಕರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ. ಇಂದು ಸಂಜೆ 4 ಗಂಟೆಗೆ ನಿರ್ಮಲಾ ಸೀತಾರಾಮನ್ ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಇನ್ನು ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ನಿರ್ಮಲಾ ಸೀತಾರಾಮನ್ ಅವರು, ಮೂರನೇ ಕಂತಿನ ಪ್ಯಾಕೇಜ್ ವಿವರಗಳನ್ನು ನೀಡಿದ್ದರು. ಪ್ಯಾಕೇಜ್ ನಲ್ಲಿ ಕೃಷಿ ಮೂಲ ಸೌಕರ್ಯ ಅಭಿವದ್ಧಿ ಸೇರಿದಂತೆ ಒಟ್ಟು 17 ಮಹತ್ವದ ಅಂಶಗಳ ಮಾಹಿತಿ ನೀಡಿದ್ದರು. ಪ್ರಮುಖವಾಗಿ ಕೃಷಿ, ಸಂಬಂಧಿತ ಕ್ಷೇತ್ರಗಳಲ್ಲಿ ಚೇತರಿಕೆ ಸಾಧ್ಯವಾಗುವಂತಹ ಕ್ರಮಗಳನ್ನು ಅವರು ಘೋಷಿಸಿದ್ದರು. ಕೃಷಿವಲಯದಲ್ಲಿ ಮೂಲಸೌಕರ್ಯ ಸುಧಾರಿಸಲು 1 ಲಕ್ಷ ಕೋಟಿ ರೂ.ಗಳ ನಿಧಿ ಸ್ಥಾಪಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದರು. ಅಂತೆಯೇ ಲಾಕ್‌ಡೌನ್ ಅವಧಿಯಲ್ಲಿ ರೈತರ ಖಾತೆಗಳಿಗೆ 18,730 ಕೋಟಿ ರೂ ಹಣ ಜಮೆ ಮಾಡುವುದರೊಂದಿಗೆ, ರೈತರಿಂದ 74,300 ಕೋಟಿ ರೂ. ಕೃಷಿ ಉತ್ಪನ್ನಗಳನ್ನು ಖರೀಸಿರುವುದಾಗಿ ಹೇಳಿದ್ದಾರೆ ಕೃಷಿ, ಮೀನುಗಾರಿಕೆ, ಪಶುಸಂವರ್ಧನೆ, ಡೈರಿ ಮತ್ತು ಆಹಾರ ಸಂಸ್ಕರಣೆ ರಂಗಗಳಿಗೆ ಉತ್ತೇಜನ ನೀಡುವ ಕ್ರಮಗಳನ್ನು ಪ್ರಕಟಿಸಿದ್ದರು.
Follow us on Social media