ಬೆಂಗಳೂರು: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ದಾಖಲಾಗಿರುವ ಎಫ್ಐಆರ್ ಕುರಿತಂತೆ ಕಾಂಗ್ರೆಸ್ ನಡೆಸುತ್ತಿರುವ ಅಭಿಯಾನದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತೀವ್ರ ಕಿಡಿಕಾರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ #FIRPeCharchaWithSonia ಎಂಬ ಹ್ಯಾಷ್ ಟ್ಯಾಗ್ ಮೂಲಕ ಸರಣಿ ಟ್ವೀಟ್ ಮಾಡಿರುವ ಅವರು, ಸೋನಿಯಾ ಗಾಂಧಿ ವಿರುದ್ಧ ದಾಖಲಾಗಿರುವ ಎಫ್ಐಆರ್’ನ್ನು ಸರ್ಕಾರ ಯಾವುದೇ ಕಾರಣಕ್ಕೂ ಹಿಂಪಡೆಯಬಾರದು ಎಂದು ಆಗ್ರಹಿಸಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸೋನಿಯಾ ವಿರುದ್ಧ ದಾಖಲಾಗಿರುವ ಎಫ್ಐಆರ್’ನ್ನು ರದ್ದುಪಡಿಸಬೇಕೆಂದುಮನವಿ ಮಾಡಿಕೊಂಡಿದ್ದಾರೆ.
ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥರು ಮಾಡಿದ್ದ ಪ್ರಮಾಣಿಕ ಟ್ವೀಟ್ ಕುರಿತು ಕಾಂಗ್ರೆಸ್ ಹೂಡಿದ್ದ ಮೊಕದ್ದಮೆ ವಿರುದ್ಧ ಜೆಪಿ ನಡ್ಡಾ ಅವರು ಕಾನೂನಾತ್ಮಕ ಹೋರಾಟ ನಡೆಸಲು ಸಾಧ್ಯವಾಗುತ್ತಿರುವುದಾದರೆ, ಸೋನಿಯಾ ಗಾಂಧಿ ಅವರೇಕೆ ಹೋರಾಡಲು ಸಾಧ್ಯವಿಲ್ಲ? ಎಂದು ಪ್ರಶ್ನಿಸಿದ್ದಾರೆ.
Follow us on Social media