ಚಿಕ್ಕೋಡಿ: ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ ಕುಡಿದ ಅಮಲಿನಲ್ಲಿ ತಹಸೀಲ್ದಾರ್ ಖಾಸಗಿ ಕಾರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಬಳಿ ಘಟನೆ ನಡೆದಿದೆ.
ಕಾಗವಾಡ ತಹಸೀಲ್ದಾರ್ ಪ್ರಮೀಳಾ ದೇಶಪಾಂಡೆ ಹಾಗೂ ಕಾರು ಚಾಲನೆ ಮಾಡುತ್ತಿದ್ದ ಅವರ ಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಿಕ್ಕೋಡಿಯಿಂದ ತಹಸೀಲ್ದಾರ್ ತಮ್ಮ ಖಾಸಗಿ ವಾಹನದಲ್ಲಿ ಕಾಗವಾಡಕ್ಕೆ ಹೋಗುವಾಗ ಮಾಂಜರಿ ಗ್ರಾಮದ ಬಳಿ ಪೊಲೀಸ್ ಕಾನ್ಸ್ ಟೇಬಲ್ ಬೈಕ್ ಡಿಕ್ಕಿ ಹೊಡೆದಿದೆ.
ತಹಸೀಲ್ದಾರ್ ಪ್ರಮೀಳಾ ದೇಶಪಾಂಡೆ ಅವರಿಗೆ ಸಣ್ಣ ಪುಟ್ಟ ಗಾಯವಾಗಿದೆ.ಪೊಲೀಸ್ ಕಾನ್ಸ್ ಟೇಬಲ್ ಶಿವಾನಂದ ಪಾಟೀಲ್ ಗಂಭೀರವಾಗಿ ಗಾಯಗೊಂಡಿದ್ದು, ಚಿಕ್ಕೋಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅಥಣಿ ತಾಲೂಕಿನ ಐಗಳಿ ಠಾಣೆ ಸಿಬ್ಬಂದಿಯಾಗಿ ಪೊಲೀಸ್ ಕಾನ್ಸ್ ಟೇಬಲ್ ಕೆಲಸ ಮಾಡುತ್ತಿದ್ದಾರೆ. ಕೊರೋನಾ ವೈರಸ್ ಹಿನ್ನೆಲೆ ಕೊಗನೋಳಿ ಚೆಕ್ ಪೋಸ್ಟ್ ನಲ್ಲಿ ಕಾರ್ಯ ನಿಮಿತ್ಯ ತೆರಳುವಾಗ ಈ ಅಪಘಾತ ನಡೆದಿದ್ದು, ಕುಡಿದು ಬೈಕ್ ಓಡಿಸುತ್ತಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಕುರಿತಾಗಿ ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow us on Social media