ಬೆಂಗಳೂರು: ಲಾಕ್ ಡೌನ್ ನಿಂದಾಗಿ ಮುಂದೂಡಲ್ಪಟ್ಟಿದ್ದ ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದೆ.
ಜೂನ್ 25ಕ್ಕೆ ಕರ್ನಾಟಕದ ಬಿಕೆ ಹರಿಪ್ರಸಾದ್, ಪ್ರಭಾಕರ್ ಕೋರೆ, ರಾಜೀವ್ ಗೌಡ ಮತ್ತು ಕುಪೇಂದ್ರ ರೆಡ್ಡಿ ಅವರ ರಾಜ್ಯಸಭೆ ಅವಧಿ ಅಂತ್ಯವಾಗಲಿದೆ. ಹಿನ್ನೆಲೆಯಲ್ಲಿ ಈ ನಾಲ್ಕು ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಸಲು ಚುನಾವಣಾ ಆಯೋಗ ಘೋಷಿಸಿದೆ.
ಜೂನ್ 9ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನ. ಜೂನ್ 10ರಂದು ನಾಮಪತ್ರ ಪರಿಶೀಲನೆ. ಜೂನ್ 13ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
Follow us on Social media