Breaking News

ಉಡುಪಿಯಲ್ಲಿ ಮತ್ತೆ 92, ದ.ಕ.ದಲ್ಲಿ ನಾಲ್ಕು ಹೊಸ ಪ್ರಕರಣಗಳು ಪತ್ತೆ

ಮಂಗಳೂರು: ದ.ಕ. ಜಿಲ್ಲೆ ಹಾಗೂ ಉಡುಪಿ ಜಿಲ್ಲ್ಲೆಯಲ್ಲಿ ಗುರುವಾರದಂದು ಮತ್ತೆ 96 ಹೊಸ ಪ್ರಕರಣಗಳು ಪತ್ತೆಯಾಗಿದೆ. ಉಡುಪಿ ಜಿಲ್ಲೆಯೊಂದರಲ್ಲೇ ಸುಮಾರು 92 ಪ್ರಕರಣಗಳು ಪತ್ತೆಯಾದರೆ, ದ.ಕ. ಜಿಲ್ಲೆಯಲ್ಲಿ 4 ಹೊಸ ಪ್ರಕರಣಗಳು ದೃಢಪಟ್ಟಿವೆ.

ಉಡುಪಿ ಜಿಲ್ಲೆಯಲ್ಲಿ ಪತ್ತೆಯಾದ 92 ಪಾಸಿಟಿವ್ ಪ್ರಕರಣಗಳಲ್ಲಿ ಎಲ್ಲರೂ ಮಹಾರಾಷ್ಟ್ರದಿಂದ ಆಗಮಿಸಿದವರಾಗಿದ್ದಾರೆ. ಈ ನಡುವೆ ಗುರುವಾರದಂದು ಉಡುಪಿ ಜಿಲ್ಲೆಯಲ್ಲಿ 20 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ ಜಿಲ್ಲೆಯಲ್ಲಿ 481 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ದ.ಕ. ಜಿಲ್ಲೆಯಲ್ಲಿ ದಿನಗಳ ಬಳಿಕ ಇಂದು ಇಬ್ಬರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಈ ನಡುವೆ ಜಿಲ್ಲೆಯಲ್ಲಿ 11 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 71 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×