ಉಡುಪಿ : ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ನಿಗದಿಪಡಿಸಿದ ದಿನದಂದೇ ನಡೆಯಲಿದ್ದು ಅದರಲ್ಲಿ ಬದಲಾವಣೆಯಿಲ್ಲ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಪರೀಕ್ಷೆಗೆ ಕೆಲವೊಂದು ಸೂಚನೆಯೊಂದಿಗೆ ಹೈಕೋರ್ಟ್ ಕೂಡಾ ಅನುಮತಿ ನೀಡಿದ್ದು ಅದರ ಅನುಸಾರವಾಗಿ ಪರೀಕ್ಷೆ ನಡೆಸಲಾಗುವುದು. ಒಂದು ಪರೀಕ್ಷಾ ಕೊಠಡಿಯಲ್ಲಿ 18 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಮಕ್ಕಳನ್ನು ಕರೆತರಲು ಸಾರಿಗೆ ವ್ಯವಸ್ಥೆ ಮಾಡುವ ಬಗ್ಗೆ ಸಾರಿಗೆ ಸಚಿವರ ಜತೆ ಚರ್ಚಿಸುತ್ತೇನೆ ಎಂದು ಹೇಳಿದರು.
ಜೂನ್ 12 ರಿಂದ 20ರವರೆಗೆ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಪುನರ್‌ಮನನ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಿಳಿಸಿದರು.
ಹಾಗೆಯೇ ಶಾಲೆಯನ್ನು ಯಾವುದೇ ಅವಸರದಲ್ಲಿ ಆರಂಭ ಮಾಡುವುದಿಲ್ಲ ಎಂದು ಹೇಳಿದರು.
Follow us on Social media