ಬೆಂಗಳೂರು: ಅಂತೂ ಇಂತೂ ಡಿಕೆ ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಕೆಲ ಷರತ್ತುಗಳ ಮೇಲೆ ಡಿಕೆ ಶಿವಕುಮಾರ್ ಅವರು ಯಾವಾಗ ಬೇಕಾದರೂ ಕಾರ್ಯಕ್ರಮ ಮಾಡಿಕೊಳ್ಳಲಿ, ಆದರೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವಂತಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಜೂನ್ 14ರಂದು ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕರಿಸಲು ಕಾರ್ಯಕ್ರಮ ನಿಗದಿಯಾಗಿತ್ತು. ಕಾರ್ಯಕ್ರಮಕ್ಕೆ ಅನುಮತಿ ಕೋರಿ ಸರ್ಕಾರಕ್ಕೆ ಪತ್ರ ಬರೆಯಲಾಗಿತ್ತು. ಲಾಕ್ಡೌನ್ ಮಾರ್ಗಸೂಚಿ ಹಿನ್ನೆಲೆಯಲ್ಲಿ ರಾಜಕೀಯ ಕಾರ್ಯಕ್ರಮಕ್ಕೆ ಅನುಮತಿ ನೀಡಲಾಗುವುದಿಲ್ಲ ಎಂದು ಹೇಳಿ ಸರ್ಕಾರ ಈ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿತ್ತು.
Follow us on Social media