ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರು ಪಾವೂರು ಗ್ರಾಮ ವ್ಯಾಪ್ತಿಯ 100 ಕುಟುಂಬಗಳಿಗೆ ತಲಾ 5 ಕೆ.ಜಿ. ಅಕ್ಕಿಯನ್ನು ನೀಡಿದರು.
ಅಕ್ಕಿಯನ್ನು ಅರ್ಹರಿಗೆ ವಿತರಿಸುವುದಕ್ಕಾಗಿ ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು ಅವರಿಗೆ ಯುವ ಕಾಂಗ್ರೆಸ್ ಮಂಗಳೂರು ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷ ರಿಯಾಝ್ ಅಹ್ಮದ್ ಪಾವೂರ್ ಮುಖಾಂತರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅರುಣ್ ಉಪಸ್ಥಿತರಿದ್ದರು
Follow us on Social media