ಬೆಂಗಳೂರು: ಕೆಎಸ್ ಆರ್ ಟಿಸಿ, ಬಿಎಂಟಿಸಿ, ಈಶಾನ್ಯ ಸಾರಿಗೆ, ವಾಯವ್ಯ ಸಾರಿಗೆ ಈ ನಾಲ್ಕೂ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗೆ ಮೇ ತಿಂಗಳ ವೇತನವನ್ನು ನೀಡುವುದಕ್ಕಾಗಿ ಅಗತ್ಯವಿದ್ದ 325.01 ಕೋಟಿ ರೂಪಾಯಿಗಳನ್ನು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದೆ.
ಕೋವಿಡ್-19 ಹಿನ್ನೆಲೆಯಲ್ಲಿ ಘೋಷಿಸಿದ್ದ ಲಾಕ್ಡೌನ್ನಿಂದಾಗಿ ಸಾರಿಗೆ ಸಂಸ್ಥೆಗಳು ಅಪಾರ ನಷ್ಟ ಅನುಭವಿಸಿದ್ದರಿಂದ ಸಿಬ್ಬಂದಿಗಳಿಗೆ ವೇತನ ನೀಡಲು ಸರ್ಕಾರ ವಿಶೇಷ ಅನುದಾನ ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದೆವು. ಇದಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಹಣ ಬಿಡುಗಡೆ ಮಾಡಿದ್ದಾರೆ ಎಂದು ಸಾರಿಗೆ ಸಚಿವರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
Follow us on Social media