ಮುಂಬೈ : ಧೋನಿ ಸಿನಿಮಾ ಖ್ಯಾತಿಯ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ (34) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮುಂಬೈ ಬಾಂದ್ರಾ ನಿವಾಸದಲ್ಲಿ ನಟ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದ್ದು ಇದಕ್ಕೆ ಕಾರಣ ಇನ್ನು ತಿಳಿದು ಬಂದಿಲ್ಲ.
ಖಾಸಗಿ ವಾಹಿನಿಯ ”ಪವಿತ್ರ ರಿಶ್ತಾ” ಧಾರಾವಾಹಿ ಮೂಲಕ ಚಿರಪರಿಚಿತರಾದ ಸುಶಾಂತ್, ”ಕೈ ಪೋ ಚೇ” ಸಿನಿಮಾ ಮೂಲಕ ಬಾಲಿವುಡ್ ಪ್ರವೇಶಿಸಿದ್ದರು. ಬಳಿಕ ”ಶುದ್ಧ್ ದೇಶಿ ರೊಮ್ಯಾನ್ಸ್”’, ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಜೀವನಾಧರಿತ ಸಿನಿಮಾದಲ್ಲಿ ನಟಿಸಿದ್ದಾರೆ.
Follow us on Social media