ಶಿವಮೊಗ್ಗ/ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಚನ್ನಗಿರಿ ಮೂಲದ 70 ವರ್ಷದ ಮಹಿಳೆ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಇವರು ಮೂರು ದಿನಗಳ ಹಿಂದೆ ಮೂಲವ್ಯಾದಿ ಮತ್ತು ಶ್ವಾಸಕೋಶ ಸಮಸ್ಯೆಯಿಂದ ಮೆಗ್ಗಾನ್ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಇವರು ಮೃತಪಟ್ಟ ನಂತರ ವರದಿ ಬಂದಿದ್ದು, ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ.
ಮಹಿಳೆ ದಾವಣಗೆರೆಯ ಮಗಳ ಮನೆಗೆ ಹೋಗಿಬಂದ ನಂತರ ಇವರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು ಎಂದು ತಿಳಿದುಬಂದಿದೆ.
Follow us on Social media