ಮಂಗಳೂರು : ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಉಳ್ಳಾಲದ ಮಹಿಳೆಗೆ ಕೊರೋನ ಪಾಸಿಟಿವ್ ಆಗಿದ್ದು, ಅವರು ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
ಉಳ್ಳಾಲದ 57 ವರ್ಷದ ಮಹಿಳೆಯನ್ನು ಅನಾರೋಗ್ಯದ ಕಾರಣದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, 8 ದಿನಗಳ ಕಾಲ ಚಿಕಿತ್ಸೆ ಪಡೆದಿದ್ದರು. ಈ ವೇಳೆ ಅವರ ಗಂಟಲ ದ್ರವ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿ ಕೊರೋನ ಪಾಸಿಟಿವ್ ಬಂದಿತ್ತು. ಅವರು ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
Follow us on Social media