ಮಂಗಳೂರು: ಬಂಟ್ವಾಳ ತಾಲೂಕಿನ ಬೆಂಜನಪದವಿನಲ್ಲಿ ಬುಧವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಒಂದಕ್ಕೆ ಕಾರು ಡಿಕ್ಕಿಯಾಗಿ ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ ಶ್ಯಾಮಲಾ (23) ಎಂಬ ಯುವತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಸಾವನ್ನಪ್ಪಿದ್ದಾರೆ. ಮೃತಪಟ್ಟ ಶ್ಯಾಮಲಾ ಬಂಟ್ವಾಳದ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಕೇಂದ್ರದಲ್ಲಿ ಉದ್ಯೋಗಿಯಾಗಿದ್ದರು. ಸ್ಕೂಟರ್ ನಲ್ಲಿದ್ದ ಹರ್ಷಿತಾ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕಾರು ಚಾಲಕ ಪರಾರಿಯಾಗಿದ್ದು, ಸ್ಥಳಕ್ಕೆ ಟ್ರಾಫಿಕ್ ಎಸ್.ಐ. ರಾಜೇಶ್ ಮತ್ತು ಸಿಬ್ಬಂದಿ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.