ಮಂಗಳೂರು : ಮೀನುಗಾರರಿಗೆ ಕ್ಯೂ ಆರ್ ಕೋಡ್ ಆಧಾರಿತ ಆಧಾರ್ ಕಾರ್ಡ್ಗಳನ್ನು ಕಡ್ಡಾಯಗೊಳಿಸುವ ನಿರ್ಣಯ ಕೈಗೊಂಡಿದ್ದು ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗುತ್ತದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಮಂಗಳವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಕರಾವಳಿ ಮೀನುಗಾರಿಕೆ ಕುರಿತ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮೀನುಗಾರರ ರಕ್ಷಣೆ ಹಾಗೂ ಅವರ ಮಾಹಿತಿಯನ್ನು ಕಲೆ ಹಾಕುವ ದೃಷ್ಠಿಯಿಂದ ಕ್ಯೂ ಆರ್ ಕೋಡ್ ಆಧಾರಿತ ಬಯೋಮೆಟ್ರಿಕ್ ಕಾರ್ಡ್ಗಳನ್ನು ಹೊಂದುವುದು ಕಡ್ಡಾಯವಾಗಿರುತ್ತದೆ. ಜಿಲ್ಲಾಡಳಿತದ ವತಿಯಿಂದ “ಸೇವಾ ಸಿಂಧು ಪೋರ್ಟ್ಲ್” ವೆಬ್ಸೈಟ್ನಲ್ಲಿ ಈ ಕಾರ್ಡ್ನ್ನು ಒದಗಿಸಲು ಅಥವಾ ಆಯಾ ಮೀನುಗಾರಿಕಾ ಇಲಾಖೆಯಲ್ಲಿ ದೊರಕುವಂತೆ ಮಾಡಲು ಚಿಂತನೆ ನಡೆಸುತ್ತೇವೆ ಎಂದರು.
ಕಿಸಾನ್ ಕಾರ್ಡ್ ಮುಖಾಂತರ ಕೃಷಿಕರಿಗೆ ಹೆಚ್ಚು ಸೌಲಭ್ಯಗಳು ದೊರಕುತ್ತಿದೆ. ಆದರೆ ಕೃಷಿಯಲ್ಲೇ ಮೀನುಗಾರಿಕೆಯೂ ಒಂದು ಭಾಗವಾಗಿದ್ದು ಕೃಷಿಕರಿಗೆ ಸಿಗುವಷ್ಟು ಸವಲತ್ತು ಮೀನುಗಾರಿಗೆ ಸಿಗುತ್ತಿಲ್ಲ. ಮೀನುಗಾರರಿಗೂ ಕಿಸಾನ್ ಕಾರ್ಡ್ನಲ್ಲಿ ಸೌಲಭ್ಯ ಒದಗಿಸಿಕೊಡಬೇಕೆಂದು ಸಂವಾದದಲ್ಲಿ ತಿಳಿಸಿದಾಗ, ಇದಕ್ಕೆ ಪ್ರತಿಕ್ರಿಯಿಸಿದ ಉಸ್ತುವಾರಿ ಸಚಿವರು, ಈ ವಿಚಾರವನ್ನು ಮೀನುಗಾರಿಕೆ ನಿರ್ದೇಶಕರು, ಲೀಡ್ ಬ್ಯಾಂಕ್ ಮ್ಯಾನೇಜರ್ ಸಂಬಂಧಪಟ್ಟ ಅಧಿಕಾರಿ ಸೇರಿದಂತೆ ಉಪಮುಖ್ಯಮಂತ್ರಿಗಳ ಗಮನಕ್ಕೆ ತಂದು ಈ ಬಗ್ಗೆ ನಿರ್ಣಯ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.
Follow us on Social media