ನವದೆಹಲಿ: ದೇಶದಲ್ಲಿ ಭಾನುವಾರ ಒಂದೇ ದಿನ ದಾಖಲೆಯ 24,850 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 6,73,165ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಇನ್ನು ಕಳೆದ 24 ಗಂಟೆಯಲ್ಲಿ ದಾಖಲೆಯ 613 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 19,268ಕ್ಕೆ ಏರಿಕೆಯಾಗಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ.
ಇನ್ನು 6,73,165 ಮಂದಿ ಸೋಂಕಿತರ ಪೈಕಿ 4,09,083 ಮಂದಿ ಗುಣಮುಖರಾಗಿದ್ದು, ಪ್ರಸ್ತುತ ಇನ್ನೂ ರಾಷ್ಟ್ರದಲ್ಲಿ 2,44,814 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ.
ಸೋಂಕು ಇದೇ ಗತಿಯಲ್ಲಿ ಮುಂದುವರೆಸಿದ್ದೇ ಆದರೆ, ರಷ್ಯಾವನ್ನು ಹಿಂದಿಕ್ಕಿ ಭಾರತ ವಿಶಅವದಲ್ಲಿಯೇ ಮೂರನೇ ಸ್ಥಾನಕ್ಕೆ ಏರುವುದು ನಿಶ್ಚಿತವಾಗಿದೆ.
ಪ್ರಸ್ತುತ 29 ಲಕ್ಷ ಪ್ರಕರಣಗಳೊಂದಿಗೆ ಅಮೆರಿಕಾ ಮೊದಲ ಸ್ಥಾನ ಮತ್ತು 15 ಲಕ್ಷಕ್ಕೂ ಅಧಿಕ ಪ್ರಕಱಣಗಳೊಂದಿಗೆ ಬ್ರೆಜಿಲ್ ಎರಡನೇ ಸ್ಥಾನ ಪಡೆದುಕೊಂಡಿದೆ. ರಷ್ಯಾ 6.74 ಲಕ್ಷ ಪ್ರಕರಣಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದು, ಭಾರತದಲ್ಲಿ ಸೋಂಕಿತರ ಸಂಖ್ಯೆ 6,73,165ಕ್ಕೆ ತಲುಪಿದೆ.
Follow us on Social media