ಮಂಗಳೂರು : ನಗರದ ಹೊರವಲಯದ ಗುರುಪುರ ಬಂಗ್ಲೆಗುಡ್ಡೆ ಎಂಬಲ್ಲಿ ಭಾನುವಾರ ಮನೆ ಮೇಲೆ ಗುಡ್ಡ ಕುಸಿದು ಇಬ್ಬರು ಮಕ್ಕಳ ಮೃತಪಟ್ಟ ಪ್ರಕರಣಸಂಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ರೂ. ಪರಿಹಾರ ನೀಡಲಾಗಿದೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಭಾನುವಾ ಈ ಬಗ್ಗೆ ಟ್ವೀಟ್ ಮಾಡಿ ಸಂತಾಪ ಸೂಚಿಸಿ್ ಮೃತಪಟ್ಟ ಕುಟುಂಬಕ್ಕೆ ತಲಾ ಐದು ಲಕ್ಷ ರೂ. ಪರಿಹಾರ ಘೋಷಿಸಿ , ಜಿಲ್ಲಾಧಿಕಾರಿಗೆ ಪರಿಹಾರ ಮೊತ್ತ ಹಸ್ತಾಂತರಿಸುವಂತೆ ಸೂಚಿಸಿದ್ದರು.
ಈ ಹಿನ್ನಲೆಯಲ್ಲಿ ಸೋಮವಾರ ಕುಟುಂಬಕ್ಕೆ ರಾಜ್ಯ ಸರಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ಮೊತ್ತವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸೋಮವಾರ ವಿತರಿಸಿದರು. ಈ ಸಂದರ್ಭ ಶಾಸಕ ಉಮಾನಾಥ ಕೋಟ್ಯಾನ್, ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಉಪಸ್ಥಿತರಿದ್ದರು.
ಗುರುಪುರ ಬಂಗ್ಲೆಗುಡ್ಡೆಯ ಬಳಿ ಗುಡ್ಡ ಕುಸಿದು ಸುಮಾರು ನಾಲ್ಕು ಮನೆಗಳಿಗೆ ಹಾನಿಯಾಗಿತ್ತು. ಘಟನೆಯಲ್ಲಿ ಗುರುಪುರ ತಾರಿಕರಿಯ ನಿವಾಸಿ ಶರೀಫ್ – ಶಾಹಿದಾ ದಂಪತಿಯ 16 ವರ್ಷದ ಪುತ್ರ ಸಫ್ವಾನ್ ಮತ್ತು 10 ವರ್ಷದ ಪುತ್ರಿ ಸಹಲಾ ಮೃತಪಟ್ಟಿದ್ದರು. ಘಟನೆಯಲ್ಲಿ ಶಾಹಿದಾ ಅವರಿ ಗಾಯಗೊಂಡಿದ್ದರು. ಸುಮಾರು ಐದು ಗಂಟೆಗಳ ಕಾರ್ಯಾಚರಣೆಯ ನಂತರ ಎನ್ ಡಿಆರ್ ಎಫ್ ಪಡೆ ಮಣ್ಣಿನಡಿಯಿಂದ ಇಬ್ಬರು ಮಕ್ಕಳ ಮೃತದೇಹವನ್ನು ಹೊರತೆಗೆದಿದ್ದರು.
Follow us on Social media