ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಸೇನಾಪಡೆ ಎನ್’ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ.
ಪುಲ್ವಾಮದ ಗೂಸು ಎಂಬ ಪ್ರದೇಶದಲ್ಲಿ ಉಗ್ರರು ಅಡಗಿಕುಳಿತಿರುವ ಖಚಿತ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಸೇನಾಪಡೆಗಳು ಕಾರ್ಯಾಚಱಣೆ ನಡೆಸಲು ಆರಂಭಿಸಿದ್ದವು. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.
ಕೂಡಲೇ ಕಾರ್ಯಾಚರಣೆಯನ್ನು ಎನ್’ಕೌಂಟರ್ ಆಗಿ ಪರಿವರ್ತಿಸಿರುವ ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರೆದು ಎನ್’ಕೌಂಟರ್ ನಡೆಸಿದ್ದಾರೆ. ಪರಿಣಾಮ ಇದೀಗ ಓರ್ವ ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳದಲ್ಲಿ ಇನ್ನೂ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.
Follow us on Social media