ಬೆಂಗಳೂರು: ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಅವರ ಗನ್’ಮ್ಯಾನ್ ಸೇರಿ ನಾಲ್ವರು ನೌಕರರಲ್ಲಿ ಕೊರೋನಾ ವೈರಸ್ ಪಾಸಿಟಿವ್ ಬಂದಿದೆ ಎಂದು ತಿಳಿದುಬಂದಿದೆ.
ಈ ಕುರಿತು ಸ್ವತಃ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ಗುಂಡೂರಾವ್ ಅವರು ಮಾಹಿತಿ ನೀಡಿದ್ದಾರೆ.
ನಮ್ಮ ಆಪ್ತಸಹಾಯಕ, ಗನ್ ಮ್ಯಾನ್ ಸೇರಿದಂತೆ ಇಬ್ಬರು ಸಿಬ್ಬಂದಿಗಳಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ. ನಾವೂ ಕೂಡ ಪರೀಕ್ಷೆಗೊಳಗಾಗಿದ್ದು, ಅದೃಷ್ಟವಶಾತ್ ನಮಗಾರಿಗೂ ವೈರಸ್ ದೃಢಪಟ್ಟಿಲ್ಲ. ಆದರೆ, ನಾವೆಲ್ಲರೂ 10-14 ದಿನಗಳ ಕಾಲ ಐಸೋಲೇಷನ್ ಮತ್ತು ಕ್ವಾರಂಟೈನ್ ನಲ್ಲಿದ್ದೇವೆ. ಸೋಂಕಿತರೊಂದಿಗೆ ನಾವು ಪ್ರಾಥಮಿಕ ಸಂಪರ್ಕದಲ್ಲಿದ್ದ ಕಾರಣ ಕ್ವಾರಂಟೈನ್ ಗೊಳಗಾಗುತ್ತಿದ್ದೇವೆ. ಶೀಘ್ರದಲ್ಲೇ ಇದರಿಂದ ಹೊರಬರುವ ವಿಶ್ವಾಸವಿದೆ ಎಂದು ಟಬು ಟ್ವೀಟ್ ಮಾಡಿದ್ದಾರೆ.
Follow us on Social media