ಬೆಂಗಳೂರು : ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ದಿಟ್ಟ ಕ್ರಮವನ್ನು ಕೈಗೊಂಡಿದ್ದು. ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ 9 ದಿನಗಳ ಕಾಲ ಲಾಕ್ ಡೌನ್ ಆದೇಶ ಜಾರಿ ಮಾಡಲಾಗಿದೆ.
ಬೆಂಗಳೂರಲ್ಲಿ ಕೊರೊನಾ ಸೋಂಕಿನ ತೀವ್ರತೆಗೆ ಲಾಕ್ ಡೌನ್ ಒಂದೇ ಪರಿಹಾರವೆನ್ನುವ ನಿಟ್ಟಿನಲ್ಲಿ ಬೆಂಗಳೂರಿನ ಕೊರೊನಾ ಉಸ್ತುವಾರಿ ಸಚಿವರು ಲಾಕ್ ಡೌನ್ ಹೇರಿಕೆಯ ಕುರಿತು ಸಿಎಂ ಅವರಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜುಲೈ 14 ರಿಂದ ಜುಲೈ 23ರ ವರೆಗೆ ಲಾಕ್ ಡೌನ್ ಆದೇಶವನ್ನು ಜಾರಿ ಮಾಡಲಾಗಿದ್ದು, ಅಗತ್ಯ ಸೇವೆಯನ್ನು ಹೊರತು ಪಡಿಸಿ ಉಳಿದೆಲ್ಲಾ ಸೇವೆನಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.
ಆದರೆ ಈಗಾಗಲೇ ನಿಗದಿಯಾಗಿರುವ ಪದವಿ ಹಾಗೂ ಸ್ನಾತಕೋತ್ತರ ಪದವಿಯ ಪರೀಕ್ಷೆಗಳು ಎಂದಿನಂತೆಯೇ ನಡೆಯಲಿದೆ. ಆದರೆ ಈ ಬಾರಿ ಲಾಕ್ ಡೌನ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ರಾಜ್ಯ ಸರಕಾರ ಸೂಚನೆಯನ್ನು ನೀಡಿದೆ.
Follow us on Social media