ನವದೆಹಲಿ: ರಾಜಸ್ಥಾನದ ಬಿಕ್ಕಟ್ಟು ಉಲ್ಬಣವಾಗುತ್ತಿದ್ದಂತೆಯೇ ಬಿಜೆಪಿ ಪಕ್ಷ ಸರ್ಕಾರದ ವಿರುದ್ಧ ದೂರವಾಣಿ ಕದ್ದಾಲಿಕೆ ಆರೋಪ ಮಾಡಿದೆ.
ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಷಡ್ಯಂತ್ರಕ್ಕೆ ಸಂಬಂಧಿಸಿದಂತೆ ಆಡಿಯೋ ಕ್ಲಿಪ್ ಬಹಿರಂಗವಾಗುತ್ತಿದ್ದಂತೆಯೇ ಬಿಜೆಪಿ ಸರ್ಕಾರದ ವಿರುದ್ಧ ದೂರವಾಣಿ ಕದ್ದಾಲಿಕೆ ಆರೋಪ ಮಾಡಿದೆ.
ಬಹಿರಂಗವಾಗಿರುವ ಆಡಿಯೋ ನೈಜವಾದದ್ದು ಎಂದು ಮುಖ್ಯಮಂತ್ರಿಗಳು ಹಾಗೂ ಇತರ ನಾಯಕರು ಹೇಳುತ್ತಿದ್ದಾರೆ. ಆದರೆ ಎಫ್ಐಆರ್ ನಲ್ಲಿ ಇದನ್ನು ಉದ್ದೇಶವಾಗಿ ಮಾಡಲಾಗಿದೆ ಎಂದು ನಮೂದಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕದ್ದಾಲಿಕೆಯಲ್ಲಿ ತೊಡಗಿದೆಯೇ ಎಂಬ ಬಗ್ಗೆ ಉತ್ತರ ನೀಡಬೇಕೆಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಹೇಳಿದ್ದಾರೆ.
ಕಾಂಗ್ರೆಸ್ ನಿಂದ ಆಡಿಯೋ ಕ್ಲಿಪ್ ಬಿಡುಗಡೆಯಾಗುತ್ತಿದ್ದಂತೆಯೇ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ರಾಜಸ್ಥಾನ ಸರ್ಕಾರ ಫೋನ್ ಟ್ಯಾಪಿಂಗ್ ಮಾಡಿದೆಯೇ? ಹೌದು ಎಂದಾದರೆ ಸರ್ಕಾರ ಪ್ರಮಾಣೀಕೃತ ವಿಧಾನ ಅನುಸರಿಸಿದೆಯೇ? ಎಂದು ಬಿಜೆಪಿ ಕೇಳಿದ್ದು ಈ ವಿಚಾರವಾಗಿ ಸಿಬಿಐ ತನಿಖೆ ನಡೆಸಬೇಕೆಂದು ಆಗ್ರಹಿಸಿದೆ.
Follow us on Social media