Breaking News

ಆಂಧ್ರ ಪ್ರದೇಶ: ಸೆಪ್ಟಂಬರ್ 5 ರಿಂದ ಶಾಲೆಗಳ ಪುನಾರಂಭಕ್ಕೆ ಚಿಂತನೆ

ಅಮರಾವತಿ: ಆಂಧ್ರ ಪ್ರದೇಶ ಸರ್ಕಾರ ಶಾಲೆ ಪುನರಾರಂಭಿಸುವ ಬಗ್ಗೆ ನಿರ್ಧಾರ ಕೈಗೊಂಡಿದೆ. ಸೆಪ್ಟೆಂಬರ್‌ 5ರಿಂದ ಶಾಲೆಗಳನ್ನು ತೆರೆಯಲು ಚಿಂತಿಸಿದೆ.

ಕೋವಿಡ್‌ ಸಾಂಕ್ರಾಮಿಕದ ನಡುವೆ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವೈ.ಎಸ್.ಜಗನ್‌ ಮೋಹನ್ ರೆಡ್ಡಿ, ಶಿಕ್ಷಣ ಸಚಿವ ಆದಿಮುಲಪು ಸುರೇಶ್‌ ನೇತೃತ್ವದಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಂಡಿದ್ದಾರೆ. ಸೆಪ್ಟೆಂಬರ್‌ 5ರಿಂದ ಶಾಲೆ ತೆರೆಯಲು ನಿರ್ಧಾರಿಸಲಾಗಿದ್ದರೂ ಅಂತಿಮ ನಿರ್ಧಾರ ವಾಸ್ತವ ಸ್ಥಿತಿಯನ್ನೇ ಆಧರಿಸಿರುತ್ತದೆ ಎಂದು ಸಚಿವ ಸುರೇಶ್‌ ತಿಳಿಸಿದ್ದಾರೆ. ಶಾಲೆ ಮತ್ತೆ ಆರಂಭವಾಗುವವರೆಗೂ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟಕ್ಕೆ ಬದಲು ಅವರ ಮನೆಗಳಿಗೇ ದವಸ, ಧಾನ್ಯ ತಲುಪಿಸಲಾಗುತ್ತದೆ  ಎಂದು ಹೇಳಿದ್ದಾರೆ.

ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಶಿಕ್ಷಣ ಆರಂಭಿಸಲಾಗುತ್ತದೆ. ಜೆಇಇ, ಐಐಐಟಿ, ಎಪಿ ಇಎಂಸಿಇಟಿ ಸೇರಿದಂತೆ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸರ್ಕಾರಿ ಜೂನಿಯರ್‌ ಕಾಲೇಜುಗಳಲ್ಲಿ ತರಬೇತಿ ಸಹ ನಡೆಸಲಾಗುತ್ತದೆ ಎಂದು ಮುಂದಿನ ಯೋಜನೆಗಳನ್ನು ತೆರೆದಿಟ್ಟಿದ್ದಾರೆ.

ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟ ಸುಧಾರಿಸಲು ಜಿಲ್ಲಾ ಮಟ್ಟದಲ್ಲಿ ಜಂಟಿ ನಿರ್ದೇಶಕರ ಹುದ್ದೆಯನ್ನು ರಚಿಸಲಾಗುತ್ತಿದೆ. ‘ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ಜಾರಿಗೆ ತರುವುದು ಹಾಗೂ ಮಧ್ಯಾಹ್ನದ ಊಟ (ಜಗನನ್ನ ಗೋರುಮುದ್ದ) ಯೋಜನೆಯ ಅನುಷ್ಠಾನಗಳನ್ನು ನಿರ್ವಹಿಸಲು ರಾಜ್ಯ ಮಟ್ಟದಲ್ಲಿ ಎರಡು ನಿರ್ದೇಶಕರ ಸಮಾನಾಂತರ ಹುದ್ದೆಗಳನ್ನು ಸೃಷ್ಟಿಸಲು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಆದೇಶಿಸಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×