ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ಅನಗತ್ಯ. ಇದು ಕೇವಲ ಮಾಧ್ಯಮಗಳ ಚರ್ಚೆಯಷ್ಟೇ. ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಇನ್ನೂ ಮೂರು ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿರಲಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ.
ಶ್ರವಣಬೆಳಗೊಳದಲ್ಲಿ ಬಿಜೆಪಿ ಕಾರ್ಯಕರೊಂದಿಗೆ ಸಭೆ ನಡೆಸುವುದಕ್ಕೂ ಮುನ್ನ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಯಾವುದೇ ನಾಯಕರೂ ಕೂಡ ಮುಖ್ಯಮಂತ್ರಿ ಕುರ್ಚಿಗಾಗಿ ಲಾಬಿ ನಡೆಸುತ್ತಿಲ್ಲ. ಇದು ಕೇವಲ ಮಾಧ್ಯಮಗಳೂ ಊಹಾಪೋಹವಷ್ಟೇ ಎಂದು ಹೇಳಿದ್ದಾರೆ.
ಇದೇ ವೇಳೆ ಕೊರೋನಾ ಪರಿಸ್ಥಿತಿಯಲ್ಲಿ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ ಅವರು, 60 ವರ್ಷಗಳ ಕಾಲ ರಾಷ್ಟ್ರವನ್ನು ಆಳುತ್ತಿದ್ದರೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವೈದ್ಯರನ್ನು ನೇಮಕ ಮಾಡುವಲ್ಲಿ ವಿಫಲವಾದವರಿಗೆ ಬಿಜೆಪಿಯನ್ನು ಟೀಕಿಸುವ, ದೂಷಿಸುವ ನೈತಿಕ ಹಕ್ಕು ಅವರಿಗಿಲ್ಲ ಎಂದು ತಿಳಿಸಿದ್ದಾರೆ.
Follow us on Social media