ನವದೆಹಲಿ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಮಹಿಳಾ ಐಪಿಎಲ್ ಆಯೋಜನೆ ಕುರಿತು ಹೇಳಿಕೆ ನೀಡಿದ ಬೆನ್ನಲ್ಲೇ ಬಿಸಿಸಿಐ ನಿರ್ಧಾರಕ್ಕೆ ಭಾರತದ ಮಹಿಳಾ ಕ್ರಿಕೆಟ್ ಆಟಗಾರ್ತಿಯರು ಬೆಂಬಲ ವ್ಯಕ್ತಪಡಿಸಿದ್ದಾರೆ.
ಅತ್ತ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಮಹಿಳಾ ಐಪಿಎಲ್ ಕುರಿತಂತೆ ಘೋಷಣೆ ಮಾಡಿದ ಬೆನ್ನಲ್ಲೇ ಇತ್ತ ಟ್ವೀಟ್ ಮಾಡಿರುವ ಮಹಿಳಾ ಕ್ರಿಕೆಟ್ ಆಟಗಾರ್ತಿಯರು, ಸೌರವ್ ಗಂಗೂಲಿ ನಿರ್ಧಾರಕ್ಕೆ ಬೆಂಬಲ ಸೂಚಿಸಿದ್ದಾರೆ.
ಭಾರತ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ನಿಜಕ್ಕೂ ಇದು ಉತ್ತಮ ಸುದ್ದಿ. ನಮ್ಮ ಏಕದಿನ ವಿಶ್ವಕಪ್ ತರಬೇತಿ ಅಭಿಯಾನ ಆರಂಭವಾಗುತ್ತಿದೆ. ಅಂತೆಯೇ ಮಹಿಳಾ ಕ್ರಿಕೆಟ್ ಗೆ ನೆರವು ನೀಡುತ್ತಿರುವುದಕ್ಕಾಗಿ ಧನ್ಯವಾದಗಳು ಎಂದು ಮಿಥಾಲಿ ಟ್ವೀಟ್ ಮಾಡಿದ್ದಾರೆ.
ಅಂತೆಯೇ ಪೂನಂ ಯಾದವ್ ಕೂಡ ಟ್ವೀಟ್ ಮಾಡಿದ್ದು, ಒಳ್ಳೆಯ ಸುದ್ದಿ, ಧನ್ಯವಾದಗಳು ಬಿಸಿಸಿಐ, ಸೌರವ್ ಗಂಗೂಲಿ ಎಂದು ಟ್ವೀಟ್ ಮಾಡಿದ್ದಾರೆ.
