ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣದಲ್ಲಿ ಜನತೆ ಸಾಮಾಜಿಕ ಜವಾಬ್ದಾರಿ ಕಾಯ್ದುಕೊಳ್ಳಬೇಕು ಎಂದು ಚಿತ್ರನಟ ಹಾಗೂ ಸೋಂಕು ನಿಯಂತ್ರಣ ಕುರಿತ ಬಿಬಿಎಂಪಿ ರಾಯಭಾರಿ ರಮೇಶ್ ಅರವಿಂದ್ ಹೇಳಿದ್ದಾರೆ.
ಈ ಕುರಿತ ತಮ್ಮ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ರಮೇಶ್ ಅರವಿಂದ್, ಜನತೆ ಸೋಂಕು ನಿಯಂತ್ರಣಕ್ಕೆ ಪಣತೊಡಬೇಕು. ವೈರಾಣು ಸಮುದಾಯಕ್ಕೆ ಹರಡದಂತೆ ನೋಡಿಕೊಳ್ಳಬೇಕು ಎಂದಿದ್ದಾರೆ.
ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜೊತೆಗೆ ಸಾಮಾಜಿಕ ಜವಾಬ್ದಾರಿಯನ್ನು ಸಹ ಅರಿತು ವರ್ತಿಸಬೇಕು. ಒಂದು ವೇಳೆ ಸೋಂಕು ತಗುಲಿದರೆ, ಮತ್ತೊಬ್ಬರಿಗೆ ಹರಡದಂತೆ ನೋಡಿಕೊಳ್ಳುವುದು ಸಹ ಸಾಮಾಜಿಕ ಕಾಳಜಿ, ಸಾಮಾಜಿಕ ಪ್ರಜ್ಞೆಯಾಗುತ್ತದೆ ಎಂದು ಕಿವಿ ಮಾತು ಹೇಳಿದ್ದಾರೆ.
Follow us on Social media