ಉಡುಪಿ : ಉಡುಪಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಭಾನುವಾರ 182 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4672ಕ್ಕೆ ಏರಿಕೆಯಾಗಿದೆ.
ಭಾನುವಾರ 182 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, 625 ವರದಿ ನೆಗೆಟಿವ್ ಆಗಿದೆ. ಇನ್ನು ಕೂಡಾ 616 ವರದಿಗಳು ಇನ್ನು ಲಭ್ಯವಾಗಬೇಕಿದೆ. ಜಿಲ್ಲೆಯಲ್ಲಿ ಇಂದು 50 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 1943 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇಂದು ಎಲ್ಲೂರಿನ 54 ವರ್ಷದ ಮಹಿಳೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಮೃತರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ.
Follow us on Social media