ಮಂಡ್ಯ: ಮಂಡ್ಯದಲ್ಲಿ ಹಲವು ಕೆರೆಗಳನ್ನು ನಿರ್ಮಿಸುವ ಮೂಲಕ ಆಧುನಿಕ ಭಗೀರಥ ಎಂದೇ ಖ್ಯಾತಿ ಪಡೆದಿರು ಕೆರೆ ಕಾಮೇಗೌಡರು ಮಹಾಮಾರಿ ಕೊರೋನಾ ವೈರಸ್ ಜಯಿಸಿದ್ದು, ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
10 ದಿನಗಳ ಹಿಂದೆ ಕಾಮೇಗೌಡ ಅವರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿತ್ತು. ನಂತರ ಅವರನ್ನು ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿತ್ತು. ಈಗ ಅವರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಮಂಡ್ಯ ಜಿಲ್ಲಾಧಿಕಾರಿ ಡಿಸಿ ವೆಂಕಟೇಶ್ ಅವರ ನೇತೃತ್ವದಲ್ಲಿ ಕಾಮೇಗೌಡರನ್ನು ಬಿಳ್ಕೋಡಲಾಯಿತು.
ಕಾಲು ನೋವಿನಿಂದ ಬಳಲುತ್ತಿದ್ದ ಕಾಮೇಗೌಡರು ಆಸ್ಪತ್ರೆಗಳಿಗೆ ಓಡಾಡುತ್ತಿದ್ದ ವೇಳೆ ಅವರಿಗೆ ಕೊರೋನಾ ಸೋಂಕು ತಗುಲಿತ್ತು.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ನಿವಾಸಿಯಾಗಿರುವ ಕಾಮೇಗೌಡರು, ಗ್ರಾಮದಲ್ಲಿ ಹಲವು ಕೆರೆ, ಕಟ್ಟೆಗಳನ್ನು ನಿರ್ಮಿಸಿ ಖ್ಯಾತಿ ಗಳಿಸಿದ್ದಾರೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್ ಕೀ ಬಾತ್‍ನಲ್ಲಿ ಕಾಮೇಗೌಡರ ಕೆರೆ ಕಟ್ಟುವ ಕಾರ್ಯವನ್ನು ಮುಕ್ತವಾಗಿ ಶ್ಲಾಘಿಸಿದ್ದರು. ಇಂಥವರು ದೇಶದಲ್ಲಿರುವುದು ನಿಜಕ್ಕೂ ನಮ್ಮ ಪುಣ್ಯ ಎಂದಿದ್ದರು.
Follow us on Social media