ಬೆಂಗಳೂರು: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಮಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದು ರಾಜ್ಯದ ಜನತೆ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಮತ್ತು ಪ್ರತಿ ಮನೆಗಳಲ್ಲಿ ಇಷ್ಟದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.
ರಾಮಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನಡೆಯಬೇಕೆಂದು ಪ್ರಾರ್ಥಿಸಲು ರಾಜ್ಯದ ಜನತೆಯಲ್ಲಿ ಮನವಿ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಾಳೆ ಪ್ರಭು ಶ್ರೀರಾಮಚಂದ್ರನ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಐತಿಹಾಸಿಕ ಶ್ರೀರಾಮ ದೇಗುಲಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ.
ರಾಜ್ಯದ ಎಲ್ಲರಿಗೂ ಪ್ರಭು ಶ್ರೀರಾಮಚಂದ್ರ ಶಾಂತಿ, ನೆಮ್ಮದಿ ನೀಡಲಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರಾರ್ಥಿಸಿದ್ದಾರೆ.
Follow us on Social media