ಮಂಗಳೂರು : ದ.ಕ. ಜಿಲ್ಲೆಯಲ್ಲಿ 173 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಗುರುವಾರದಂದು 107 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ.
ಇನ್ನು ಗುರುವಾರ ಜಿಲ್ಲೆಯಲ್ಲಿ 11 ಮಂದಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 201ಕ್ಕೆ ಏರಿಕೆಯಾಗಿದೆ. ಇನ್ನು ದ.ಕ. ಜಿಲ್ಲೆಯಲ್ಲಿ 3398 ಸಕ್ರಿಯ ಪ್ರಕರಣಗಳಿವೆ. ಇನ್ನು ಇಲ್ಲಿಯ ತನಕ ದ.ಕ. ಜಿಲ್ಲೆಯಲ್ಲಿ ಒಟ್ಟು 6715 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇನ್ನು ಇಲ್ಲಿಯ ತನಕ ಒಟ್ಟು 3116 ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಹೊಂದಿದ್ದಾರೆ.
ಇನ್ನು ಗುರುವಾರ ಪತ್ತೆಯಾದ ಪ್ರಕರಣಗಳ ಪೈಕಿ 83 ಐಎಲ್ಐ ಕೊರೊನಾ ಕೇಸ್ ಗಳಾಗಿವೆ. ಜಿಲ್ಲೆಯಲ್ಲಿ 13 ಮಂದಿಗೆ ಸಾರಿ ಪ್ರಕರಣ ಪತ್ತೆಯಾಗಿದೆ. 23 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ದೃಢಪಟ್ಟಿದೆ. 50 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ನಾಲ್ವರು ವಿದೇಶದಿಂದ ಬಂದವರಲ್ಲಿ ಸೋಂಕು ದೃಢಪಟ್ಟಿದೆ.
Follow us on Social media