ಬೆಂಗಳೂರು: ಪ್ರತಿಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ವೈದ್ಯ ಹಾಗೂ ವರುಣಾ ಕ್ಷೇತ್ರದ ಶಾಸಕರೂ ಆದ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಡಾ.ಯತಿಂದ್ರ ಸಿದ್ದರಾಮಯ್ಯ ಅವರಿಗೆ ಶುಕ್ರವಾರ (ಆಗಸ್ಟ್ 7) ಕೋವಿಡ್ ಸೋಂಕು ದೃಢವಾಗಿರುವ ವರದಿ ಬಂದಿದೆ. ಸೋಮವಾರ (ಆಗಸ್ಟ್ 3) ಸಿದ್ದರಾಮಯ್ಯ ಅವರಿಗೆ ಕೊರೋನಾ ಇರುವುದು ಖಚಿತವಾಗಿದ್ದ ಬೆನ್ನಲ್ಲೇ ಯತೀಂದ್ರ ಅವರು ತಾವೂ ಸಹ ಕೊರೋನಾ ಟೆಸ್ಟ್ ಮಾಡಿಸಿಕೊಂಡಿದ್ದರು.
“ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ.” ಯತೀಂದ್ರ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ಸಿದ್ದರಾಮಯ್ಯ ಅವರೀಗ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸಿಎಂ ಬಿ.ಎಸ್.ಯಡಿಯೂರಪ್ಪ ಕೂಡ ಅದೇ ಆಸ್ಪತ್ರೆಯಲ್ಲಿ ಕೊರೋನಾ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರೂ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಹೇಳಿದೆ,
Follow us on Social media