Breaking News

ತರಕಾರಿ-ದಿನಸಿ ವ್ಯಾಪಾರಿಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಿ, ರಾಜ್ಯಗಳಿಗೆ ಕೇಂದ್ರದ ಹೊಸ ಸೂಚನೆ

ನವದೆಹಲಿ: ದಿನಸಿ ಅಂಗಡಿ ಮತ್ತು ತರಕಾರಿ ವ್ಯಾಪಾರಿಗಳನ್ನು ಕೊರೋನ ಪರೀಕ್ಷೆಗೆ ಒಳಪಡಿಸಬೇಕು ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಶನಿವಾರ ಸೂಚನೆ ನೀಡಿದೆ.

ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಯಲ್ಲಿ ಕೇಂದ್ರ ಸರ್ಕಾರ ಹೊಸ ನಿರ್ಧಾರ ತೆಗೆದುಕೊಂಡಿದ್ದು, ದಿನಸಿ ಅಂಗಡಿ ಮತ್ತು ತರಕಾರಿ ವ್ಯಾಪಾರಿಗಳನ್ನು ಕೊರೋನ ಪರೀಕ್ಷೆಗೆ ಒಳಪಡಿಸುವುದು ಸೂಕ್ತ ಎಂದೂ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ದೇಶಾದ್ಯಂತ ದಿನಬಳಕೆ ವಸ್ತುಗಳ ವ್ಯಾಪಾರಿಗಳು, ದಿನಸಿ ಮತ್ತು ತರಕಾರಿ ವ್ಯಾಪಾರಿಗಳ ಮುಖಾಂತರ ಸೋಂಕು ಪ್ರಸರಣದ ಕುರಿತು ಮಾಹಿತಿ ಲಭ್ಯವಾಗುತ್ತಿದ್ದು, ಇದೇ ಕಾರಣಕ್ಕೆ ದಿನಸಿ ಅಂಗಡಿ ಮತ್ತು ತರಕಾರಿ ವ್ಯಾಪಾರಿಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚನೆ ನೀಡಿದೆ.

ಈ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು, ದಿನಸಿ ಅಂಗಡಿ ಮತ್ತು ತರಕಾರಿ ವ್ಯಾಪಾರಿಗಳ ಮೂಲಕ ಕೋವಿಡ್ ಸೋಂಕು ಹರಡುವ ಸಂಭಾವ್ಯರಾಗಿರುವ ಕಾರಣ, ಅವರಿಗೆಲ್ಲರಿಗೂ ಕೊರೋನಾ ಟೆಸ್ಟ್ ಮಾಡಿಸಬೇಕು ಎಂದು ಸೂಚಿಸಲಾಗಿದೆ ಎಂದು ಅವರು ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದ್ದಾರೆ. 

ಪತ್ರದಲ್ಲಿ ಅಲ್ಲದೆ ಕೊರೋನಾ ಸೋಂಕಿತರನ್ನು ಕರೆದೊಯ್ಯಲು ಅನುಕೂಲವಾಗುವಂತೆ ಸುಸಜ್ಜಿತ ಆಂಬುಲೆನ್ಸ್ ಸೌಲಭ್ಯ ನಿಗದಿಪಡಿಸಬೇಕು. ತುರ್ತು ಕರೆಗಳಿಗೆ ತಕ್ಷಣವೇ ಸ್ಪಂದಿಸುವಂತೆ ಸೂಚಿಸಿದ್ದಾರೆ. ಕೊರೋನಾ ಈಗ ಹೊಸ ಪ್ರದೇಶಗಳಿಗೆ ಹರಡುತ್ತಿದೆ. ಹೀಗಾಗಿ ಆರಂಭದಲ್ಲಿಯೇ ಸೋಂಕಿತರನ್ನು ಪತ್ತೆಹಚ್ಚಿ ಪರೀಕ್ಷೆಗೆ ಒಳಪಡಿಸುವ ಮೂಲಕ ಕೊರೋನಾ ಸೋಂಕಿನ ಪ್ರಕರಣ ಕಡಿಮೆ ಮಾಡುವಂತೆ ಸೂಚಿಸಿದ್ದಾರೆ. 

ಇದಲ್ಲದೇ, ಆಮ್ಲಜನಕ ವ್ಯವಸ್ಥೆ ಹೊಂದಿರುವ ಅಂಬುಲೆನ್ಸ್​ ಹಾಗೂ ತುರ್ತು ಸ್ಪಂದನಾ ವ್ಯವಸ್ಥೆಯನ್ನು ಕಾರ್ಯಾಚರಣೆಗೊಳಿಸಬೇಕಾಗುತ್ತದೆ. ಅಂಬುಲೆನ್ಸ್​ ಸೇವೆ ದೊರೆಯದ ಪ್ರಕರಣಗಳನ್ನು ನಿತ್ಯವೂ ಗಮನಿಸಬೇಕು ಹಾಗೂ ಅದನ್ನು ಶೂನ್ಯಕ್ಕೆ ಇಳಿಸಬೇಕು. ಹೊಸ ಪ್ರದೇಶಗಳಲ್ಲಿ ಸಣ್ಣ ಅಥವಾ ದೊಡ್ಡ ಪ್ರಮಾಣದಲ್ಲಿ ಕರೊನಾ ಪ್ರಕರಣಗಳು ಕಂಡುಬರುತ್ತಿವೆ. ಮುಖ್ಯವಾಗಿ ಇದನ್ನು ನಿಯಂತ್ರಿಸಬೇಕಿದೆ. ಇದರ ಜತೆಗೆ ಜೀವ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಬೇಕಿದೆ ಎಂದು ಭೂಷಣ್​ ಹೇಳಿದ್ದಾರೆ.  ಸಾವಿನ ಸಂಖ್ಯೆಯನ್ನು ಕೂಡ ನಿಯಂತ್ರಣಕ್ಕೆ ತರಬೇಕಿದ್ದು, ಇದು ಶೇ.1ಕ್ಕಿಂತ ಕಡಿಮೆ ಇರುವಂತೆ ನೋಡಿಕೊಳ್ಳಬೇಕಿದೆ ಎಂದು ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳಿಗೆ ರಾಜೇಶ್​ ಭೂಷಣ್​ ಪತ್ರ ಬರೆದಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×